Skip to content
Opens in a new window
Listen to this chapter • 1:28

[1] ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ.

[2] ಯೆಹೋವನೇ, ನನ್ನನ್ನು ಪರೀಕ್ಷಿಸು, ಪರಿಶೀಲಿಸು; ನನ್ನ ಅಂತರಿಂದ್ರಿಯವನ್ನೂ, ಹೃದಯವನ್ನೂ ಪರಿಶೋಧಿಸು.

[3] ನಿನ್ನ ಶಾಶ್ವತವಾದ ಪ್ರೀತಿಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡಿದ್ದೇನೆ; ನಿನಗೆ ನಂಬಿಗಸ್ತನಾಗಿ ನಡೆದುಕೊಂಡಿದ್ದೇನೆ.

[4] ನಾನು ಮೋಸಗಾರರ ಸಹವಾಸ ಮಾಡುವವನಲ್ಲ; ಕಪಟಿಗಳನ್ನು ಸೇರುವವನಲ್ಲ.

[5] ನನಗೆ ದುರ್ಜನರ ಕೂಟವು ಅಸಹ್ಯ; ದುಷ್ಟರ ಸಂಗವು ಬೇಕಿಲ್ಲ.

[6] ಯೆಹೋವನೇ, ನಾನು ನಿರ್ದೋಷಿ ಎಂದು, ಕೈಗಳನ್ನು ತೊಳೆದುಕೊಂಡವನಾಗಿ,

[7] ನಿನ್ನ ಅದ್ಭುತಕೃತ್ಯಗಳ ವರ್ಣನೆಯ ಸ್ತೋತ್ರ ಮಾಡುತ್ತಾ, ನಿನ್ನ ಯಜ್ಞವೇದಿಯನ್ನು ಪ್ರದಕ್ಷಿಣೆಮಾಡುವೆನು.

[8] ಯೆಹೋವನೇ, ನಿನ್ನ ನಿವಾಸವು ನನಗೆ ಎಷ್ಟೋ ಪ್ರಿಯ; ನಿನ್ನ ಪ್ರಭಾವ ಸ್ಥಾನವು ನನಗೆ ಇಷ್ಟ.

[9] ಪಾಪಿಷ್ಠರ ಪ್ರಾಣದ ಸಂಗಡ ನನ್ನ ಪ್ರಾಣವನ್ನೂ ತೆಗೆಯಬೇಡ; ಕೊಲೆಪಾತಕರ ಜೀವದೊಂದಿಗೆ ನನ್ನ ಜೀವವನ್ನೂ ತೆಗೆಯಬೇಡ.

[10] ಅವರ ಕೈಗಳು ಬಲಾತ್ಕಾರ ನಡೆಸುತ್ತವೆ; ಅವರ ಬಲಗೈ ಲಂಚದಿಂದ ತುಂಬಿದೆ.

[11] ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಳ್ಳುವವನು; ಯೆಹೋವನೇ, ಅವರಿಂದ ನನ್ನನ್ನು ವಿಮೋಚಿಸಿ ಪ್ರಸನ್ನನಾಗಿರು.

[12] ನನ್ನ ಪಾದವು ಸಮಭೂಮಿಯಲ್ಲಿ ನಿಂತಿದೆ; ಕೂಡಿದ ಸಭೆಯಲ್ಲಿ ಯೆಹೋವನನ್ನು ಕೊಂಡಾಡುವೆನು.

ಕೀರ್ತನೆಗಳು — Chapters