Skip to content
Opens in a new window
Listen to this chapter • 0:59

[1] ದೇವರೇ, ನ್ಯಾಯವನ್ನು ತೀರಿಸು; ನನಗೋಸ್ಕರ ವ್ಯಾಜ್ಯವನ್ನು ನಡೆಸಿ ಭಕ್ತಿ ಇಲ್ಲದ ಜನಾಂಗದಿಂದ ತಪ್ಪಿಸು, ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು.

[2] ದೇವರೇ, ನೀನು ನನಗೆ ದುರ್ಗಸ್ಥಾನವಲ್ಲವೇ; ಏಕೆ ನನ್ನನ್ನು ತಳ್ಳಿಬಿಟ್ಟೆ? ನಾನು ಏಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು?

[3] ನಿನ್ನ ಬೆಳಕನ್ನು, ನಿನ್ನ ಸತ್ಯಪ್ರಸನ್ನತೆಗಳನ್ನು ಕಳುಹಿಸು; ಅವು ನಿನ್ನ ಪರಿಶುದ್ಧಪರ್ವತಕ್ಕೆ ನನ್ನನ್ನು ಕರೆದುಕೊಂಡು ಹೋಗಿ ನಿನ್ನ ನಿವಾಸಕ್ಕೆ ಬರಮಾಡಲಿ.

[4] ದೇವರೇ, ನನ್ನ ದೇವರೇ, ಆಗ ನಾನು ನಿನ್ನ ಯಜ್ಞವೇದಿಯ ಬಳಿಗೆ, ನನ್ನ ಆನಂದನಿಧಿಯಾಗಿರುವ ನಿನ್ನ ಹತ್ತಿರಕ್ಕೆ ಸೇರಿ, ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು.

[5] ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.

ಕೀರ್ತನೆಗಳು — Chapters