Skip to content
Opens in a new window
Listen to this chapter • 1:35

[1] ಅಧಿಕಾರಿಗಳೇ, ನೀವು ಕೊಡುವ ತೀರ್ಪುಗಳು ನೀತಿಗನುಸಾರವಾಗಿವೆಯೋ? ಜನರ ವ್ಯಾಜ್ಯಗಳನ್ನು ನ್ಯಾಯಯುತವಾಗಿ ಬಗೆಹರಿಸುತ್ತಿರೋ?

[2] ನಿಮ್ಮ ಮನಸ್ಸಿನ ಕಲ್ಪನೆಯೆಲ್ಲಾ ಕೆಟ್ಟತನವೇ; ನೀವು ದೇಶದವರಿಗೆ ಅನ್ಯಾಯವನ್ನೇ ತೂಗಿಕೊಡುವವರಾಗಿದ್ದೀರಲ್ಲಾ.

[3] ದುಷ್ಟರು ಜನ್ಮದಿಂದಲೇ ಧರ್ಮಭ್ರಷ್ಟರು; ಅವರು ಹುಟ್ಟಿದಂದಿನಿಂದ ಸುಳ್ಳುಗಾರರಾಗಿ ದಾರಿ ತಪ್ಪಿದವರು.

[4] ಅವರು ಸರ್ಪದಂತೆ ವಿಷಭರಿತರು.

[5] ಜಾಣತನದಿಂದ ಮಂತ್ರಿಸುವ ಹಾವಾಡಿಗರ ನಾಗಸ್ವರಕ್ಕೂ ಮರುಳಾಗದ ಅಥವಾ ಅದಕ್ಕೆ ಕಿವಿಗೊಡದ ಕಳ್ಳ ಹಾವಿನಂತೆ ಇರುತ್ತಾರೆ.

[6] ದೇವರೇ, ಅವರ ಹಲ್ಲುಗಳನ್ನು ಮುರಿದುಬಿಡು; ಯೆಹೋವನೇ, ಪ್ರಾಯದ ಸಿಂಹಗಳ ಕೋರೆ ಹಲ್ಲುಗಳನ್ನು ಕಿತ್ತುಹಾಕು.

[7] ಕ್ಷಣದಲ್ಲಿ ಹರಿದು ಕಾಣದೆ ಹೋಗುವ ನೀರಿನಂತೆ ಅವರು ಮಾಯವಾಗಲಿ; ಬಾಣ ತಾಗಿತೋ ಎಂಬಂತೆ ಅವರು ಬೀಳಲಿ.

[8] ಒಣಗಿ ಸತ್ತ ಬಸವನಹುಳದಂತೆ ನಿರ್ನಾಮವಾಗಲಿ; ಗರ್ಭವಿಳಿದ ಪಿಂಡದಂತೆ ಸೂರ್ಯನನ್ನು ನೋಡದೆ ಹೋಗಲಿ.

[9] ಇನ್ನೂ ಹಸಿರಿರುರುವಾಗಲೇ ಒಲೆಗೆ ಹಾಕಿದ ಮುಳ್ಳಿನ ಕೊಂಪೆಯನ್ನು ಬಿರುಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಿಶ್ಶೇಷಮಾಡಲಿ.

[10] ದುಷ್ಟರಿಗಾಗುವ ಪ್ರತಿದಂಡನೆಯನ್ನು ಭಕ್ತರು ನೋಡಿ ಹರ್ಷಿಸಿ, ಅವರ ರಕ್ತದಲ್ಲಿ ಕಾಲಾಡಿಸುವರು.

[11] ನೀತಿವಂತನಿಗೆ ಫಲವುಂಟೆಂತಲೂ, ಲೋಕದಲ್ಲಿ ನ್ಯಾಯಸ್ಥಾಪಕನಾದ ದೇವರು ಇದ್ದಾನೆಂತಲೂ ಸರ್ವರು ಒಪ್ಪಿಕೊಳ್ಳುವರು.

ಕೀರ್ತನೆಗಳು — Chapters