Skip to content
Opens in a new window
Listen to this chapter • 1:00

[1] ಯೆಹೋವನು ಸ್ಥಾಪಿಸಿದ ಪಟ್ಟಣವು ಪರಿಶುದ್ಧ ಪರ್ವತದ ಮೇಲಿದೆ.

[2] ಆತನು ಯಾಕೋಬ್ ವಂಶದವರ ಎಲ್ಲಾ ನಿವಾಸಗಳಿಗಿಂತ, ಚೀಯೋನಿನ ದ್ವಾರಗಳನ್ನು ಹೆಚ್ಚಾಗಿ ಪ್ರೀತಿಸುತ್ತಾನೆ.

[3] ದೇವನಗರವೇ, ನಿನ್ನ ವಿಷಯವಾದ ಗೌರವೋಕ್ತಿಯೇನೆಂದರೆ,

[4] “ರಹಬ, ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ ಫಿಲಿಷ್ಟಿಯ, ತೂರ್, ಕೂಷ್, ಜನಾಂಗಗಳು ಅಲ್ಲೇ ಹುಟ್ಟಿದವು” ಎಂಬುದೇ.

[5] ಇದರಿಂದ ಚೀಯೋನೇ ಪ್ರತಿಯೊಂದು ಜನಾಂಗದ ಜನ್ಮನಗರವೆಂದು ಹೇಳಲ್ಪಡುವುದು; ಅದನ್ನು ಪರಾತ್ಪರನಾದ ದೇವರು ತಾನೇ ಸ್ಥಿರಪಡಿಸುವನು.

[6] ಯೆಹೋವನು ಜನಾಂಗಗಳ ಪಟ್ಟಿಯನ್ನು ಮಾಡುವಾಗ, “ಪ್ರತಿಯೊಂದರ ವಿಷಯ ಇದು ಅಲ್ಲಿಯೇ ಹುಟ್ಟಿದ್ದು” ಎಂದು ಬರೆಯುವನು. ಸೆಲಾ

[7] ಇವರು ಹಾಡುತ್ತಾ, ಕುಣಿಯುತ್ತಾ, “ನನ್ನ ಜೀವಜಲದ ಒರತೆಗಳೆಲ್ಲಾ ನಿನ್ನಲ್ಲಿಯೇ ಇವೆ” ಎಂದು ಹೇಳುವರು.

ಕೀರ್ತನೆಗಳು — Chapters