Skip to content
Opens in a new window
Listen to this chapter • 0:48

[1] ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಆತನು ಮಹಿಮಾ ವಸ್ತ್ರವನ್ನು ಧರಿಸಿದ್ದಾನೆ, ಶೌರ್ಯವನ್ನು ನಡುಕಟ್ಟನ್ನಾಗಿ ಬಿಗಿದಿದ್ದಾನೆ; ಹೌದು, ಭೂಲೋಕವು ಸ್ಥಿರವಾಗಿರುವುದು ಅದು ಕದಲುವುದಿಲ್ಲ.

[2] ಅನಾದಿಯಿಂದ ನಿನ್ನ ಸಿಂಹಾಸನವು ಸ್ಥಿರವಾಗಿದೆ; ಯುಗಯುಗಾಂತರದಿಂದಲೂ ನೀನು ಇರುವಿ.

[3] ಯೆಹೋವನೇ, ನದಿಗಳು ಮೊರೆದವು, ನದಿಗಳು ಭೋರ್ಗರೆದವು; ನದಿಗಳು ಘೋಷಿಸುತ್ತವೆ.

[4] ಜಲರಾಶಿಗಳ ಘೋಷಕ್ಕಿಂತಲೂ, ಮಹಾತರಂಗಗಳ ಗರ್ಜನೆಗಿಂತಲೂ, ಉನ್ನತದಲ್ಲಿರುವ ಯೆಹೋವನ ಮಹಿಮೆಯು ಗಾಂಭೀರ್ಯವುಳ್ಳದ್ದು.

[5] ಯೆಹೋವನೇ, ನಿನ್ನ ಕಟ್ಟಳೆಗಳು ಬಹುಖಂಡಿತವಾಗಿವೆ; ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.

ಕೀರ್ತನೆಗಳು — Chapters